Breaking News

ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ: ಮಧು ಬಂಗಾರಪ್ಪ

ಶಿರಸಿ(ಉತ್ತರ ಕನ್ನಡ): ಕಾಂಗ್ರೆಸ್​ ಪಕ್ಷಕ್ಕೆ ಈಗಾಗಲೇ ಹೊಟ್ಟೆ ತುಂಬಿದೆ. ಆದರೆ ಬೇರೆಯವರು ಬಂದು ಊಟ ಮಾಡುವಷ್ಟು ತಟ್ಟೆಯಲ್ಲಿ ಊಟವಿದೆ. ಕಾರಣ ಪಕ್ಷದ ಹಿತದೃಷ್ಟಿಯಿಂದ ಬೇರೆ ಪಕ್ಷದ ನಾಯಕರು ಬಂದಲ್ಲಿ ಸ್ವಾಗತ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.‌

ಶಿರಸಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬರುವ ಶಾಸಕರಿಗೆ, ಮಾಜಿ ಶಾಸಕರಿಗೆ ಬರಲು ಸ್ವಾಗತ. ಅಸಮಾಧಾನ ಇದ್ದಲ್ಲಿ ಅದನ್ನು ಹಿರಿಯ ನಾಯಕರು ಬಗೆಹರಿಸುತ್ತಾರೆ. ಕೆಲವೊಮ್ಮೆ ಅನಿವಾರ್ಯವಾಗಿ ಪಕ್ಷ ಸೇರ್ಪಡೆ ಮಾಡಿಕೊಳ್ಳಬೇಕಾಗುತ್ತದೆ ಎಂದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಕಾರವಾರ ಮತ್ತು ಶಿವಮೊಗ್ಗ ಕ್ಷೇತ್ರವನ್ನು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ. ಇದರ ಜೊತೆಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್​ಗೆ ನಾವು ತಯಾರಾಗಿದ್ದು, ಖಂಡಿತ ಕಾಂಗ್ರೆಸ್ ಹೆಚ್ಚಿನ ಕಡೆ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *