Breaking News

ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ:ಎಸ್.ಟಿ ಸೋಮಶೇಖರ್.

ಬೆಂಗಳೂರು: ಪಕ್ಷ ಬಿಡುವ ಕುರಿತು ನಾನು ಯಾರೊಂದಿಗೂ ಮಾತುಕತೆ ನಡೆಸಿಲ್ಲ, ಮುಂಬರಲಿರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆಗೆ ಸ್ಪರ್ಧೆ ಬಯಸಿರುವವರು ಮಾತ್ರ ಕಾಂಗ್ರೆಸ್ ಸೇರಿದ್ದಾರೆ. ನನ್ನೊಂದಿಗೆ ಇರಲು ಬಯಸಿರುವ ಬೆಂಬಲಿಗರು ಬಿಜೆಪಿಯಲ್ಲೇ ಇದ್ದಾರೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟೀಕರಣ ನೀಡಿದ್ದಾರೆ.

ಯಶವಂತಪುರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಪಕ್ಷ ಬಿಡುವ ಬಗ್ಗೆ ಯಾರ ಜತೆಗೂ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನಾಯಕರ ಜತೆಗೂ ಇದರ ಬಗ್ಗೆ ಮಾತನಾಡಿಲ್ಲ ಸಿಎಂ ಜತೆಗೂ ರಾಜಕೀಯ ವಿಚಾರವಾಗಿ ಮಾತನಾಡಿಲ್ಲ. ಕಾಂಗ್ರೆಸ್​ಗೆ ನನ್ನ ಬೆಂಬಲಿಗರು ಅಷ್ಟೇ ಅಲ್ಲ, ಎಲ್ಲ‌ ಕ್ಷೇತ್ರಗಳಿಂದಲೂ ಹೋಗಿದ್ದಾರೆ ಯಾರು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿಗೆ ಸ್ಪರ್ಧೆ ಮಾಡಬೇಕು ಅಂದುಕೊಂಡಿದ್ದಾರೋ ಅವರು ಕಾಂಗ್ರೆಸ್​ಗೆ ಹೋಗಿದ್ದಾರೆ.

ಯಾರು ಶಾಸಕರ ಜತೆ ಇರಬೇಕು ಅಂದುಕೊಂಡಿದ್ದಾರೋ ಅವರು ನನ್ನ ಜತೆಯೇ ಇದ್ದಾರೆ ನನ್ನ ಜತೆ 85 ಮುಖಂಡರು ಉಳಿದುಕೊಂಡಿದ್ದಾರೆ, ಯಡಿಯೂರಪ್ಪ ಜತೆಗೂ ಮಾತುಕತೆ ನಡೆಸಿದ್ದೇನೆ. ದುಡುಕಬೇಡ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ, ನಾನು ದುಡುಕುತ್ತಿಲ್ಲ ಎಂದರು.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *