ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ನಾನು ಮನೆಯಲ್ಲಿ ಕುಳಿತು ಎಲ್ಲವನ್ನೂ ನೋಡುತ್ತಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್ ವಾದ, ವಿವಾದ ನೋಡಿದ್ದೇನೆ. ಅವರು ಅಷ್ಟು ಸುಲಭವಾಗಿ ಮಾತನಾಡುವುದಿಲ್ಲ ಎಂದು ಹೇಳಿದರು.
ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕುಮಾರಸ್ವಾಮಿ ಅವರನ್ನು ಅಷ್ಟು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ. ತುಂಬಾ ವಿಷಯಗಳಿವೆ. ನನಗೆ ಎಲ್ಲವೂ ಗೊತ್ತಿದೆ. ಪೆನ್ ಡ್ರೈವ್ ಬಗ್ಗೆ ಲಘುವಾಗಿ ಮಾತನಾಡುವುದು ಬೇಡ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ನುಡಿದರು.
ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ಕುಮಾರಸ್ವಾಮಿ ದೇವೇಗೌಡರ ಮಗ ಎಂದು ಮಾತನಾಡುವುದಿಲ್ಲ. ನನಗೆ ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಎಲ್ಲವೂ ಒಂದೇ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





