ಹಾವೇರಿ: ವೆಲ್ಡಿಂಗ್ ಮಾಡುವಾಗ ಬೃಹತ್ ಪಟಾಕಿಯ ಗೊಡೋನ್ ಗೆ ಬೆಂಕಿ ತಗುಲಿ ಸುಮಾರು 1 ಕೋಟಿ ಮೌಲ್ಯದ ಸಿಡಿಮದ್ದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ಬಳಿಯ ಇರುವ ಭೂಮಿಕಾ ಟ್ರೇಡರ್ಸ್ ಎಂಬ ಗೊಡೋನ್ ನಲ್ಲಿ ನಡೆದಿದೆ. ಸಿ ಜಿ ವಿರೇಶ್ ಎಂಬುವವರಿಗೆ ಸೇರಿದ್ದ ಗೊಡೋನ್ ಆಗಿದ್ದು, ಕೆಲಸ ಮಾಡುತ್ತಿದ್ದ ಆರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಮಿಳುನಾಡಿನ ಶಿವಕಾಶಿ ಎಂಬಲ್ಲಿಯಿಂದ ಬಂದಿದ್ದ ಪಟಾಕಿ ಸಾಮಾಗ್ರಿಗಳನ್ನು ಇಂದು ಬಿಲ್ಡಿಂಗ್ ನಲ್ಲಿ ವೆಲ್ಡಿಂಗ್ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ಥಿನ ಗೊಡೋನ್ ಗೆ ಬಿದ್ದಿರುವ ಬೆಂಕಿಯಾಗಿದ್ದು, ನೀರಿನ ಪೈಪ್ ಬಿಟ್ಟು ಎದ್ನೊ ಬಿದ್ನೊ ಎಂದು ಓಡಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಮುಂದಾಗಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,
bigtvnews | Hubli Dharwad News | Kannada News | Karnataka News Hubli News | News In Hubli | Local news





