ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಂದು ಟರ್ಮಿನಲ್ 2 ಕ್ಕೆ ಸ್ಥಳಾಂತರಗೊಳ್ಳಬೇಕಿದ್ದ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯನ್ನು ಕಾರಣಾಂತರಗಳಿಂದ ಮುಂದೂಡಿರುವ ಬಗ್ಗೆ ಬಿಐಎಎಲ್ ವಕ್ತಾರರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದು, ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಕಾರ್ಯಾಚರಣೆಯ ಮುಂದಿನ ದಿನಾಂಕವನ್ನು ತಿಳಿಸುವುದಾಗಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಕಾರ್ಯಾಚರಣೆ ಸ್ಥಳಾಂತರದ ಅಂತಿಮ ಹಂತದ ಸಿದ್ಧತೆ ಮತ್ತು ಪರೀಕ್ಷಾ ಸಂದರ್ಭದಲ್ಲಿ ಪ್ರಯಾಣಿಕರಿಗೆ ಸೂಕ್ತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ನಿಟ್ಟಿನಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದ್ದರಿಂದ, ಮುಂದಿನ ಸೂಚನೆ ಪ್ರಕಟ ಆಗುವವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು ಟರ್ಮಿನಲ್ 1 ರಿಂದಲೇ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





