Breaking News

ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ…

ಬೆಳಗಾವಿ: ಜಿಲ್ಲೆಯ ಶಿವಬಸವ ನಗರದಲ್ಲಿ ನಿನ್ನೆ(ಬುಧವಾರ) ರಾತ್ರಿ 9 ಗಂಟೆ ಸುಮಾರಿಗೆ ಹಂತಕರು ಬೈಕ್​ ಮೇಲೆ ಹಿಂದಿನಿಂದ ಬಂದು ಯುವಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯ ಲಭ್ಯವಾಗಿದೆ. ಬೆಳಗಾವಿಯ ರಾಮನಗರದ ವಡ್ಡರವಾಡಿಯ ನಿವಾಸಿ ನಾಗರಾಜ ಗಾಡಿವಡ್ಡರ(26) ಕೊಲೆಯಾದ ಯುವಕ.

ಶಿವಬಸವ ನಗರದ ರಸ್ತೆಯಲ್ಲಿ ಮೊಬೈಲ್​ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ನಾಗರಾಜನ ಕೊಲೆ ಮಾಡಲು ಬೈಕ್ ಮೇಲೆ ಬಂದ ಮೂವರು ಆರೋಪಿಗಳು ಹೊಂಚು ಹಾಕಿ ಕಾಯುತ್ತಿದ್ದರು. ಬೈಕ್​ನ್ನು ದಾಟಿ ಮುಂದೆ ನಾಗರಾಜ ಹೋಗುತ್ತಿದ್ದಂತೆ ಹಿಂದಿನಿಂದ ಓರ್ವ ಆರೋಪಿ ಕಲ್ಲಿನಿಂದ ಜೋರಾಗಿ ತಲೆಗೆ ಹೊಡೆದಿದ್ದಾನೆ. ಹೊಡೆತದ ರಭಸಕ್ಕೆ ನಾಗರಾಜ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *