ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಎ. ಮಂಜು ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಟರಾಜ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿತು.
ಅರಕಲಗೂಡು ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕರಾಗಿರುವ ಎ ಮಂಜು ಅವರು ತಾವು ಬಿಜೆಪಿಯಲ್ಲಿದ್ದಾಗ ಪ್ರಜ್ವಲ್ ರೇವಣ್ಣ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಜ್ವಲ್ ಅಕ್ರಮ ಎಸಗಿರುವುದರಿಂದ ತಮ್ಮನ್ನು ವಿಜೇತ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಕೋರಿದ್ದ ಪರಾಜಿತ ಅಭ್ಯರ್ಥಿ ಮಂಜು ಅವರ ಮನವಿಯನ್ನು ಪುರಸ್ಕರಿಸಲು ಕೂಡ ನ್ಯಾಯಾಲಯ ನಿರಾಕರಿಸಿದೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಸಮೀಪ ಇರುವಾಗಲೇ ರಾಜ್ಯದಲ್ಲಿ ಜೆಡಿಎಸ್ ಪಕ್ಷದಿಂದ ಏಕೈಕ ಲೋಕಸಭಾ ಸದಸ್ಯರಾಗಿದ್ದ ಪ್ರಜ್ವಲ್ ರೇವಣ್ಣ ಅವರು ತಮ್ಮ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಈ ಹಿಂದೆ 2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news





