Breaking News

ಅರಣ್ಯ ಪ್ರದೇಶಗಳಿಂದಲೇ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ದೂರಸಂಪರ್ಕ…

ಕಾರವಾರ: ಗುಡ್ಡಗಾಡು ಪ್ರದೇಶಗಳಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದ ಒಬ್ಬರನ್ನೊಬ್ಬರು ಸಂಪರ್ಕ ಮಾಡುವುದೇ ದೊಡ್ಡ ಸವಾಲು. ಅದರಲ್ಲಿಯೂ ಸರ್ಕಾರಿ ಯೋಜನೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ನೆಟ್‌ವರ್ಕ್‌ ಪ್ರಮುಖ ಸಾಧನವಾಗಿದ್ದರೂ ಸಂಪರ್ಕ ಸಾಧ್ಯವಾಗದೆ ಜನ ಪರದಾಡುವಂತಾಗಿದೆ. ಆದರೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕೇಂದ್ರ ಸರ್ಕಾರ ದೂರಸಂಪರ್ಕ ಇಲಾಖೆಯಿಂದ 232 ಹೊಸ ಮೊಬೈಲ್‌ ಟವರ್‌ಗಳನ್ನು ಮಂಜೂರು ಮಾಡಲಾಗಿತ್ತಾದರೂ ಇದೀಗ ಈ ಯೋಜನೆಗೂ ವಿಘ್ನ ಎದುರಾಗಿದೆ.

ಬಹುಭಾಗ ಅರಣ್ಯ ಪ್ರದೇಶಗಳಿಂದಲೇ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ 232 ಟವರ್ ಮಂಜೂರಿಯಾಗಿತ್ತು. ಈ ಪೈಕಿ 18 ಟವರ್‌ಗಳನ್ನು 2G ಯಿಂದ 3G ಮೇಲ್ದರ್ಜೆಗೆ ಏರಿಸಲಾಗಿದೆ. ಈವರೆಗೂ ಮೊಬೈಲ್‌ ಸಿಗ್ನಲ್‌ ಸಿಗದ 196 ಹಳ್ಳಿಗಳನ್ನು ಗುರುತಿಸಿ ಟವರ್‌ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಇವುಗಳಲ್ಲಿ ಕಾರವಾರ -8, ಅಂಕೋಲಾ-12,‌ ಜೋಯಿಡಾ- 42, ಕುಮಟಾ-19, ಹೊನ್ನಾವರ-8, ಭಟ್ಕಳ-13, ಸಿದ್ದಾಪುರ-17, ಶಿರಸಿ-24, ಮುಂಡಗೋಡು- 10 ಹೊಸ ಟವರ್​ ನಿರ್ಮಾಣಕ್ಕೆ ಮಂಜೂರು ದೊರಕಿದ ನಂತರ ಜಿಲ್ಲಾಡಳಿತ ಉಚಿತವಾಗಿ ಅರಣ್ಯ ಭೂಮಿಯನ್ನು ಆಯಾ ತಾಲೂಕು ವ್ಯಾಪ್ತಿಯಲ್ಲಿ ಟವರ್ ನಿರ್ಮಾಣಕ್ಕೆ 30 ವರ್ಷದ ಲೀಸ್​​ನೊಂದಿಗೆ ನೀಡಿತ್ತು.

Share News

About BigTv News

Check Also

ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧನ ಮಾಡಿದ ಹಳೇ ಹುಬ್ಬಳ್ಳಿ ಪೊಲೀಸರು..

ಹುಬ್ಬಳ್ಳಿ: ಈಗಾಗಲೇ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ವೆಂಕಟೇಶ ನೇತೃತ್ವದ ತಂಡ ಸೋಮವಾರ …

Leave a Reply

Your email address will not be published. Required fields are marked *

You cannot copy content of this page