Breaking News

ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿದ ಕ್ರೂರಿ…

ದೊಡ್ಡಬಳ್ಳಾಪುರ: ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿ ಕ್ರೂರತ್ವ ಮೆರೆದ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ. ಅದೇ ಗ್ರಾಮದ ತಿಮ್ಮರಾಜು‌ ಮತ್ತು ಕುಟುಂಬದವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸದ್ಯ ಗಾಯಾಳು ಅಂಬರೀಷ್ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ತಿಮ್ಮರಾಜು, ಶಶಿಕಲಾ, ರಘು, ಮುನಿರಾಮಯ್ಯ, ಅರವಿಂದ ಹರ್ಷವರ್ಧನ್, ಸಿಂಧು‌ ಎಂಬುವರ‌ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಅರವಿಂದ, ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದ ಐವರು ನಾಪತ್ತೆಯಾಗಿದ್ದಾರೆ. ಉಳಿದವರನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *