Breaking News

ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ತಂದೆಯಾಗಿದ್ದಾರೆ…

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ತಂದೆಯಾಗಿದ್ದಾರೆ. ಅವರ ಪತ್ನಿ ಸಂಜನಾ ಗಣೇಶನ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಮ್ರಾ ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಫೋಟೋವನ್ನು ಶೇರ್​ ಮಾಡಿದ್ದಾರೆ.

ನಮ್ಮ ಪುಟ್ಟ ಕುಟುಂಬ ಬೆಳೆದಿದೆ. ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ಇಂದು ಬೆಳಗ್ಗೆ ನಾವು ನಮ್ಮ ಮಗು ಅಂಗದ್ ಜಸ್ಪ್ರೀತ್ ಬುಮ್ರಾ ಅವರನ್ನು ಈ ಜಗತ್ತಿಗೆ ಸ್ವಾಗತಿಸಿದೆವು. ಈಗ ನಮ್ಮ ಸಂತೋಷಕ್ಕೆ ಮಿತಿಯಿಲ್ಲ. ಪೋಷಕರಾಗಿ ನಮ್ಮ ಜೀವನದಲ್ಲಿ ಈ ಹೊಸ ಅಧ್ಯಾಯದ ಪ್ರತಿ ಕ್ಷಣವನ್ನು ಆನಂದಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಜಸ್ಪ್ರೀತ್ ಬುಮ್ರಾ ಇನ್​ಸ್ಟಾಗ್ರಾಂನಲ್ಲಿ ಬರೆದಿದ್ದಾರೆ. ಈ ಸಂದರ್ಭದಲ್ಲಿ, ಬುಮ್ರಾ ದಂಪತಿಗಳು ಮಗುವಿನ ಕೈ ಹಿಡಿದಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *