ಮಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರ 75ನೇ ಜನ್ಮದಿನ ಹಾಗೂ ವೃತ್ತಿಜೀವನದ 50ರ ಸಂಭ್ರಮದ ಆಚರಣೆಯ ಸಲುವಾಗಿ ‘ಅನಂತ ಅಭಿನಂದನೆ’ ಕಾರ್ಯಕ್ರಮವು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಭಾನುವಾರ ಸಂಭ್ರಮದಿಂದ ನಡೆಯಿತು. ಅನಂತ್ ನಾಗ್ ಮತ್ತು ಗಾಯತ್ರಿ ದಂಪತಿಯನ್ನು ಅತಿಥಿಗಳು ಮಲ್ಲಿಗೆ, ಜಾಜಿ ಹೂವಿನ ಮಾಲೆ, ಬೆಳ್ಳಿಯ ವೀಳ್ಯದ ಎಲೆ, ತುಳುನಾಡಿನ ಪರಂಪರೆಯ ಕಂಬಳದ ಬೆತ್ತ, ಪುಷ್ಪವೃಷ್ಟಿ ಸಹಿತ ವಿಶೇಷವಾಗಿ ಸನ್ಮಾನಿಸಿ, ಗೌರವಿಸಿದರು.
ಅಭಿನಂದನೆ’ಕಾರ್ಯಕ್ರಮಕ್ಕೂ ಮುನ್ನ ಅನಂತ್ ನಾಗ್ ದಂಪತಿಯನ್ನು ಡೊಂಗರಕೇರಿ ಕೆನರಾ ಹೈಸ್ಕೂಲ್ನಿಂದ ಟಿ ವಿ ರಮಣ ಪೈ ಸಭಾಂಗಣದವರೆಗೆ ಸಾರೋಟಿನಲ್ಲಿ ಮೆರವಣಿಗೆಯಲ್ಲಿ ಕರೆತರಲಾಯಿತು. ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನೆ ಬಳಿಕ ಸಿನಿಮಾ ದಿಗ್ಗಜರು, ಪತ್ರಕರ್ತರು, ಯುವ ಸಮುದಾಯದೊಂದಿಗೆ ಸಂವಹನ ಕಾರ್ಯಕ್ರಮ ನಡೆಯಿತು. ಕಾಸರಗೋಡು ಚಿನ್ನಾ, ಸದಾಶಿವ ಶೆಣೈ, ದಿನೇಶ್ ಮಂಗಳೂರು, ಲಕ್ಷ್ಮಣ ಕುಮಾರ್ ಮಲ್ಲೂರು ಸಂವಾದದಲ್ಲಿ ಭಾಗವಹಿಸಿದ್ದರು. ಮಧ್ಯಾಹ್ನದ ಬಳಿಕ ಅನಂತ್ ನಾಗ್ ಅವರ ಆಯ್ದ ಜನಪ್ರಿಯ ಹಾಡುಗಳು, ನೃತ್ಯ ವೈವಿಧ್ಯ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





