Breaking News

ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ…..

ಮಂಗಳೂರು: ಕರಾವಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ವರ್ಷ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ರಾಷ್ಟ್ರೀಯ ಮಕ್ಕಳ ಉತ್ಸವ ಎಂದು ಆಚರಿಸಲಾಗುತ್ತದೆ. ಈ ವೇಳೆ, ಶ್ರೀ ಕೃಷ್ಣವೇಷ ಸ್ಪರ್ಧೆ ನಡೆಯುತ್ತದೆ. ಈ ಬಾರಿ ಶ್ರೀಕೃಷ್ಣ ಸ್ಪರ್ಧೆಯಲ್ಲಿ ನೂರಾರು ಪುಟಾಣಿಗಳು

ಭಾಗವಹಿಸಿದರು.ಅಷ್ಟಮಿ ಪ್ರಯುಕ್ತ ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿಯಲ್ಲಿ ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರೀಯ ಮಕ್ಕಳ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬಾರಿ 41ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಿತು. ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ನಿಟ್ಟಿನಲ್ಲಿ ಕಳೆದ ನಾಲ್ಕು ದಶಕಗಳಿಂದ ಕಲ್ಕೂರ ಪ್ರತಿಷ್ಠಾನ ಈ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾದ ಶ್ರೀ ಕೃಷ್ಣ ವೇಷ ಸ್ಪರ್ಧೆ ರಾತ್ರಿ 12 ಗಂಟೆಯವರೆಗೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಸಾವಿರಾರು ಪುಟಾಣಿಗಳು ಭಾಗವಹಿಸುತ್ತಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *