ಹಾಸನ: ಆಲೂರು ತಾಲೂಕಿನ ಹಳ್ಳಿಯೂರಿನಲ್ಲಿ ಭೀಮ ಎಂಬ ಕಾಡಾನೆ ದಾಳಿಯಿಂದ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಶಾರ್ಪ್ ಶೂಟರ್ ಹೆಚ್. ವೆಂಕಟೇಶ್ ಅವರ ಕುಟುಂಬಕ್ಕೆ ಪ್ರತಿಷ್ಠಾನದಿಂದ 10 ಲಕ್ಷ ರೂ. ವಿಶೇಷ ಪರಿಹಾರ ಸೇರಿ ಒಟ್ಟು 25 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.

ಹೊನ್ನವಳ್ಳಿಯಲ್ಲಿರುವ ವೆಂಕಟೇಶ್ ಅವರ ಮನೆಗೆ ಗುರುವಾರ ಭೇಟಿ ನೀಡಿದ ಸಚಿವರು, ಮೃತ ವೆಂಕಟೇಶ್ ಅವರ ಪತ್ನಿ ಜಿ.ಎಸ್. ಮಂಜುಳಾ ಮತ್ತು ಪುತ್ರರಾದ ಮೋಹಿತ್ ಮತ್ತು ಮಿಥುನ್ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ವೆಂಕಟೇಶ್ ಅವರು ತಮ್ಮ ಅದ್ಭುತ ಕಾರ್ಯದಿಂದ ಆನೆ ವೆಂಕಟೇಶ್ ಎಂದೇ ಖ್ಯಾತರಾಗಿದ್ದರು. ಶಾರ್ಪ್ ಶೂಟರ್ ವೆಂಕಟೇಶ್ ಅವರ ನಿಧನದಿಂದ ಅರಣ್ಯ ಇಲಾಖೆಗೆ ತುಂಬಲಾರದ ನಷ್ಟವಾಗಿದೆ. ನಿಮ್ಮ ಈ ನೋವಿನಲ್ಲಿ ನಾವೂ ಭಾಗಿಯಾಗುತ್ತೇವೆ ಎಂದು ಸಾಂತ್ವನ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

