ಧಾರವಾಡ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಳ್ಳತನ ಹಾವಳಿ ಹೆಚ್ಚುತ್ತಲೇ ಇದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ಕೂಡ ಹಾವಳಿ ಹೆಚ್ಚಾಗಿದ್ದು, ಮನೆಗಳ್ಳನನ್ನು ಬಂಧಿಸುವಲ್ಲಿ ಧಾರವಾಡ ಪೊಲೀಸರು ಯಶಸ್ವಿಯಾಗಿದ್ದಾರೆ.ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮಲ್ಲಯ್ಯ ಮಠಪತಿ ಬಂಧಿತ ಆರೋಪಿಯಾಗಿದ್ದು, ಮೂರು ಪ್ರಕರಣಗಳಲ್ಲಿ ಒಟ್ಟು 123.8 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿದ

ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.ಅಂದಾಜು 5 ಲಕ್ಷ 56 ಸಾವಿರ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿರುವ ಪೊಲೀಸರು,ಕೀಲಿ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಕಳ್ಳನ್ನು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕಳ್ಳನ ಕರಾಮತ್ತು ಬಯಲಾಗಿತ್ತು. ಧಾರವಾಡ ಉಪನಗರ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿ ಆರೋಪಿಗೆ ಕೋಳ ತೊಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

