Breaking News

ಬೇರೆಯವರ ಮಾತಿಗೆ ಉತ್ತರ ಕೊಡಲ್ಲ: ಬಿಜೆಪಿ ವಿರುದ್ಧ ಗೃಹ ಸಚಿವ ಕಿಡಿ..!

ಹುಬ್ಬಳ್ಳಿ:ನಾನು ಸನಾತನ‌ ಧರ್ಮದ ಬಗ್ಗೆ ಮಾತಾಡಿಲ್ಲ. ಬೇರೆಯವರ ಏನ ವಿಶ್ಲೇಷನೆ ಮಾಡ್ತಾರೆ ಅದಕ್ಕೆಲ್ಲ ಉತ್ತರ ಕೊಡಲ್ಲ. ನಾನು ಸಮಯ ಸಂದರ್ಭದಲ್ಲಿ ಏನ ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾರ ಏನ ಬೇಕಾದರೂ ವಿಶ್ಲೇಷಣೆ ಮಾಡಲಿ.ಅವರ ಹಾಗೆ ಮಾತಾಡ್ತಾರೆ ಹೀಗೆ ಮಾತಾಡ್ತಾರೆ

ಅಂದ್ರೆ ನಾನ ಉತ್ತರ ಕೊಡಲ್ಲ. ಮೋದಿ ಅವರು ನಾನ ಹೇಳಿರೋ ಹೇಳಿಕೆ ಬಗ್ಗೆ ಮಾತಾಡಿಲ್ಲ. ಸನಾತನ ಧರ್ಮದ ವಿಚಾರವಾಗಿ ಮಾತಾಡಿದ್ದಾರೆ. ಬಿಜೆಪಿಯವರು ಹೋರಾಟ ಮಾಡಲಿ ನಾವು ಕೊಡ್ತೀವಿ ಎಂದರು.ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಉತ್ತರ ಕೊಡ್ತಾರೆ. ಬರಗಾಲದ ಬಗ್ಗೆ

ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ಶಿಘ್ರವೇ ಬರಗಾಲ ಘೋಷಣೆ ಮಾಡಲಾಗವುದು. ಜೊತೆಗೆ ಕೇಂದ್ರಕ್ಕೂ ವರದಿ ಕಳಸ್ತೀವಿ. ಗದಗ ನಲ್ಲಿ ಹೊಸದಾಗಿ ಕಮಾಂಡೋ ಸೆಂಟರ್ ಮಾಡಿದ್ದಾರೆ.‌ ಹಾಗಾಗಿ ಗದಗ ಹೋಗ್ತೀದಿನಿ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ‌ ಬಿಜೆಪಿಯವರಿಗೆ ಏನ ಬೇರೆ ಕಾನೂನು ಇದೆಯಾ.?? ಎಂದು ಆಕ್ರೋಶ ವ್ಯಕ್ತಪಡಿಸಿದರು.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *