ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರುಜೋಡಣೆ ಮಾಡುವ ಸಲುವಾಗಿ ನಡೆದ ‘ಭಾರತ್ ಜೋಡೋ ಯಾತ್ರೆ’ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಗುರುವಾರ ರಾಮನಗರದಲ್ಲಿ ಹಮ್ಮಿಕೊಂಡಿದ್ದ 5 ಕಿ.ಮೀ ಪಾದಯಾತ್ರೆಯಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಬಳಿಕ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತೀಯರ ಭಾವನೆ ಕೆರಳಿಸಿ, ಭಾರತೀಯ ಸಮಾಜ ವಿಭಜಿಸಿ, ಭಾರತೀಯರ ಹೃದಯಗಳನ್ನು ಒಡೆಯುವ ಮೂಲಕ ಎಷ್ಟಾಗುತ್ತೋ ಅಷ್ಟು ಮತ ಗಿಟ್ಟಿಸಲು ಯತ್ನಿಸುತ್ತಿದ್ದಾರೆ. ಭಾರತೀಯರನ್ನು ವಿಭಜಿಸಿ, ಹಿಂಸಿಸಿ ಮತ ಗಳಿಸುವ ದುರ್ಗತಿ ಬಿಜೆಪಿಗೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





