Breaking News

ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿ…

ಬೆಂಗಳೂರು : ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿಯಾದ ಘಟನೆ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಇಂದು ನಡೆದಿದೆ.

ಬೆಳಗ್ಗೆ ಕಾಮಾಕ್ಯ ಕಡೆಯಿಂದ ಪದ್ಮನಾಭ ನಗರದ ಖಾಸಗಿ ಶಾಲೆಗೆ ತೆರಳುತ್ತಿದ್ದ ವ್ಯಾನ್ ಚಾಲಕ ರಸ್ತೆ ಸಿಗ್ನಲ್ ಫ್ರೀ ಇದ್ದುದರಿಂದ ದಿಢೀರ್ ಯೂಟರ್ನ್ ಪಡೆದಿದ್ದಾರೆ. ಈ ವೇಳೆ ವ್ಯಾನ್ ಚಕ್ರ ರಸ್ತೆ ವಿಭಜಕದ ಮೇಲೆ ಹತ್ತಿ, ಪಲ್ಟಿಯಾಗಿದೆ.

ವ್ಯಾನ್​ನಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿದ್ದರು. ಚಾಲಕ ಹಾಗೂ ಓರ್ವ ಬಾಲಕಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿಧಾನವಾಗಿ ವಾಹನ ಚಲಾಯಿಸುತ್ತಿದ್ದುದರಿಂದ ಅವಘಡ ತಪ್ಪಿದೆ ಎಂಬ ಮಾಹಿತಿ ದೊರೆತಿದೆ. ಸಾರ್ವಜನಿಕರು ಹಾಗೂ ಬನಶಂಕರಿ ಸಂಚಾರ ಪೊಲೀಸರು ಮಕ್ಕಳನ್ನು ರಕ್ಷಿಸಿ ಶಾಲೆಗೆ ಕಳುಹಿಸಿದ್ದಾರೆ‌. ಘಟನಾ ಸ್ಥಳದಿಂದ ವ್ಯಾನ್ ಸ್ಥಳಾಂತರಿಸಲಾಗಿದೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *