Breaking News

ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ ಕಾರ್ಖಾನೆ….

ಶಿವಮೊಗ್ಗ: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು, ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್​ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ ಅವರು, ಕಾರ್ಖಾನೆ ಉಳಿಸಿಕೊಂಡಿರುವ ಸಾಲದ ಮೊತ್ತ, ವಿದ್ಯುತ್ ಬಿಲ್ ಮತ್ತು ಮುಂದಿನ ಹಾದಿ ಏನಾಗಿರಬೇಕು ಎಂಬ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಸಭೆ‌ ನಡೆಸಲು‌ ಸಚಿವರು‌ ಸೂಚಿಸಿದರು. ಈ ಸಭೆಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್​ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರನ್ನೂ ಕರೆಯಲು ಸಚಿವರು ಸೂಚಿಸಿದರು.

ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಮೈಸೂರು ಪೇಪರ್ ಮಿಲ್ಸ್ ಸದ್ಯಕ್ಕೆ 1,482 ಕೋಟಿ ರೂ. ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ 2010 ರಿಂದ ಈತನಕ 850 ಕೋಟಿ ರೂ. ಸಾಲದ ರೂಪದಲ್ಲಿ ಕೊಟ್ಟಿದೆ ಎಂದು ಅವರು ತಿಳಿಸಿದರು. ಈ ಮಧ್ಯೆ ಎಂಪಿಎಂ ಖಾಸಗೀಕರಣಕ್ಕೆ ಯತ್ನ ನಡೆದಿತ್ತು. ಸಂಸ್ಥೆ ಮೇಲೆ ಇರುವ ಆರ್ಥಿಕ‌ ಹೊರೆಯನ್ನು ನಿಭಾಯಿಸಲು ಹಣಕಾಸು ಇಲಾಖೆಯ ಸಹಕಾರ ಬೇಕಾಗುತ್ತದೆ. ಹೀಗಾಗಿ ಅಧಿಕಾರಿಗಳ ಸಭೆ ನಂತರ ಖಾಸಗೀಕರಣದ ರೂಪುರೇಷೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *