Breaking News

ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ…..

ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಕೃಷಿ ವಿಶ್ವ ವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಹಾಗೂ ವಿಸ್ಮಯಕಾರಿ ಕೀಟ ಪ್ರಪಂಚ ಸೇರಿದಂತೆ ಹಲವು ಮೇಳಗಳನ್ನು ಸಿಎಂ ಉದ್ಘಾಟಿಸಿದರು.
ಬಳಿಕ ಹಲವು ಬಗೆಯ ಸಸ್ಯಗಳನ್ನು ಹಾಗೂ ವಿವಿಧ ಹೂವಿನ ಅಲಂಕಾರ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಿಎಂಗೆ ಸಚಿವ ಸಂತೋಷ್ ಲಾಡ್ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು. ಸುಸ್ಥಿರ ಕೃಷಿಗೆ ಸಿರಿಧಾನ್ಯಗಳು ಘೋಷ್ಯವಾಕ್ಯದಲ್ಲಿ ಕೃಷಿ ಮೇಳ ನಡೆಯಲಿದ್ದು, ನಾಲ್ಕು ದಿನಗಳ ಮೇಳಕ್ಕೆ 10 ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ‌. ಪ್ರದರ್ಶನಕ್ಕಾಗಿ 191 ಹೈಟೆಕ್ ಮಳಿಗೆ, 351 ಸಾಮಾನ್ಯ ಮಳಿಗೆ, 24 ಯಂತ್ರೋಪಕರಣ, 50 ಜಾನುವಾರು ಪ್ರದರ್ಶನ ಮಳಿಗೆಗಳನ್ನು ಹಾಕಲಾಗಿದೆ.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *