Breaking News

ವ್ಯಕ್ತಿಯೋರ್ವ ಮದ್ಯದ ಅಮಲಿನಲ್ಲಿ ಮೈ-ಕೈ ಮತ್ತು ಕತ್ತು ಕೊಯ್ದುಕೊಂಡು ಸಾವನ್ನಪ್ಪಿರುವ ಘಟನೆ ಬೆಳಕಿಗೆ…

ದಾವಣಗೆರೆ: ವ್ಯಕ್ತಿಯೋರ್ವ ಮದ್ಯದ ಅಮಲಿನಲ್ಲಿ ಮೈ-ಕೈ ಮತ್ತು ಕತ್ತು ಕೊಯ್ದುಕೊಂಡು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ವಡ್ನಾಳ್ ರಾಜಣ್ಣ ಬಡಾವಣೆಯಲ್ಲಿ ಕಳೆದ ದಿನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.‌ ಬಸವರಾಜ್​ (31) ಕತ್ತು ಕೊಯ್ದುಕೊಂಡು ಮೃತಪಟ್ಟ ವ್ಯಕ್ತಿ.

ಕ್ಷೌರದ ಅಂಗಡಿಯಲ್ಲಿ ಬ್ಲೇಡ್​ ತೆಗೆದುಕೊಂಡು ಮೈ-ಕೈ ಮತ್ತು ಕತ್ತು ಕೊಯ್ದುಕೊಂಡು ಬಸವರಾಜಪ್ಪ,‌ ರಕ್ತ ಸುರಿಯುತ್ತಿದ್ದರು ಬೀದಿ ಬದಿ ತಿರುಗಾಡುತ್ತಿದ್ದುದನ್ನು ಸ್ಥಳೀಯರು ಕಂಡು ತಕ್ಷಣ ಚಿಕಿತ್ಸೆಗೆಂದು ಆಸ್ಪತ್ರೆಗೆ ಸೇರಿಸಿದ್ದರು. ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಬಸವರಾಜಪ್ಪ ಮೃತಪಟ್ಟಿದ್ದಾನೆ. ಬಸವರಾಜ್ ಮೂಲತಃ ಹರಿಹರ ತಾಲೂಕಿನ ನಿಟ್ಟೂರು ಗ್ರಾಮದವನು ಎಂದು ತಿಳಿದುಬಂದಿದೆ.

ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿದ್ದ ಬಸವರಾಜ್​ ಚನ್ನಗಿರಿ ತಾಲೂಕಿನ ಸೋಮಶೆಟ್ಟಿಹಳ್ಳಿಯ ತಮ್ಮ ಅಕ್ಕನ ಮನೆಯಲ್ಲಿ ವಾಸವಾಗಿದ್ದನು. ಅತಿಯಾದ ಮದ್ಯ ವ್ಯಸನದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ಈತ ನಿನ್ನೆ ಬ್ಲೇಡ್​ನಿಂದ ಕತ್ತು ಮೈ ಕೈಯನ್ನು ಕೊಯ್ದುಕೊಂಡು ಸಾವನ್ನಪ್ಪಿರುವ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *