ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಇನ್ನೂ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಮಲಾ ಹಂಪನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘ದ ಜರ್ನಿ ಆಫ್ ಲೈಫ್’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಸಿಎಂ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ, ಸಾಮಾಜಿಕ, ಆರ್ಥಿಕ ತಳಹದಿಯ ಮೇಲೆ ರೂಪುಗೊಳ್ಳದಿದ್ದರೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂದಿದ್ದರು. ಹೀಗಾಗಿ, ಸ್ವಾತಂತ್ರ್ಯದ ಉದ್ದೇಶ ಈಡೇರಬೇಕಾದರೆ ಸಮಾಜದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆ ಆಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





