ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ಸಿಎಂ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ಡೆಂಗ್ಯೂ ಬಗ್ಗೆ ಭಯ ಬೇಡ. ಜಾಗ್ರತೆಯಿರಲಿ ಎಂದು ಸಾರ್ವಜನಿಕರಿಗೆ ಸಿಎಂ ಸಲಹೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




