Breaking News

ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ: ಸಿದ್ದರಾಮಯ್ಯ.

ಮೈಸೂರು: ನನ್ನ ಇಡೀ ರಾಜಕಾರಣ ಕೋಮುವಾದಿ ಪಕ್ಷಗಳ ವಿರುದ್ಧವೇ ನಡೆದಿದೆ. ಹೀಗಿರುವಾಗ ನಾನು ಬಿಜೆಪಿಗೆ ಹೋಗುತ್ತೇನೆಂದರೆ ಯಾರಾದರೂ ನಂಬುತ್ತಾರೆಯೇ?. ಅದು ನಂಬುವ ಮಾತೇ? ನಾನು ಬಿಜೆಪಿಗೆ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ಆದಿಚುಂಚನಗಿರಿ ಶಾಖಾಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡುತ್ತಾ, ನಾನು ಬಿಜೆಪಿ ಸೇರಲು ಹೋಗಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ನಗೆಪಾಟಲಿನದು. ನನ್ನ ಹೆಣವೂ ಸಹ ಬಿಜೆಪಿಗೆ ಹೋಗದು. ನಾನು ಯಾವುದೇ ಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡಿದರೇ, ಅದಕ್ಕೆ ಆ ಪಕ್ಷವನ್ನು ಸೇರುತ್ತೇನೆ ಎಂದು ಹೇಳುವುದು ಸರಿಯಲ್ಲ ಎಂದರು.

Share News

About BigTv News

Check Also

ನಕಲಿ ಸಿಐಡಿ ಅಧಿಕಾರಿಗಳನ್ನು ಬಂಧನ ಮಾಡಿದ ಹಳೇ ಹುಬ್ಬಳ್ಳಿ ಪೊಲೀಸರು..

ಹುಬ್ಬಳ್ಳಿ: ಈಗಾಗಲೇ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ವೆಂಕಟೇಶ ನೇತೃತ್ವದ ತಂಡ ಸೋಮವಾರ …

Leave a Reply

Your email address will not be published. Required fields are marked *

You cannot copy content of this page