Breaking News

ಖಾಸಗಿ ವಾಹನ ಚಾಲಕರ ಬೆಂಗಳೂರು ಬಂದ್ ರಾಜಕೀಯ ಪ್ರೇರಿತ: ಡಿ ಕೆ ಶಿವಕುಮಾರ್.

ಬೆಂಗಳೂರು: ಖಾಸಗಿ ವಾಹನ ಚಾಲಕರ ಬೆಂಗಳೂರು ಬಂದ್ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಖಾಸಗಿ ವಾಹನದವರು ಎಲ್ಲರೂ ಬಂದು ಹೋರಾಟ ಮಾಡುವ ಅವಶ್ಯಕತೆ ಇಲ್ಲ. ಖಾಸಗಿ ಬಸ್​ನವರಿಗೆ ತೊಂದರೆಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನಮ್ಮ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಅವಕಾಶ ನೀಡುರುವುದರಿಂದ ಅವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದರು.

ಆದರೆ ಈ ಹೋರಾಟದಲ್ಲಿ ಓಲಾ, ಉಬರ್ ಕಾರು, ಆಟೋದವರು ಪ್ರತಿಭಟನೆ ಮಾಡುತ್ತಿರುವುದರ ಹಿಂದೆ ರಾಜಕೀಯ ಪ್ರೇರಣೆ ಇದ್ದಂತೆ ಕಾಣುತ್ತಿದೆ. ನಮಗೆ ಅವರ ಬಗ್ಗೆ ಅನುಕಂಪ ಇದೆ. ಅವರಿಗೆ ಏನಾದರು ಸಮಸ್ಯೆ ಇದ್ದರೆ ನಾವು ಅದನ್ನು ಬಗೆಹರಿಸುವ ಅಲೋಚನೆ ಇದೆ ಎಂದು ತಿಳಿಸಿದರು.
ಹೋರಾಟದ ಹೆಸರಲ್ಲಿ ಪ್ರಯಾಣಿಕರಿಗೆ ತೊಂದರೆ ಕೊಡುವುದು ಸರಿಯಲ್ಲ. ಪ್ರಯಾಣಿಕರಿಗೆ ಈ ರೀತಿ ತೊಂದರೆ ಮಾಡುವುದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಸರ್ಕಾರ ಅವರ ಬೇಡಿಕೆಗಳನ್ನು ಗಮನಿಸುತ್ತದೆ. ಯಾವ ರೀತಿ ಖಾಸಗಿ ವಾಹನದವರಿಗೆ ಸಹಾಯ ಮಾಡಬೇಕು ಎಂಬ ಬಗ್ಗೆ ಆಲೋಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಡಿಕೆಶಿ ತಿಳಿಸಿದರು

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *