Breaking News

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡ ಮೇಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು X ಖಾತೆಯಲ್ಲಿ (ಹಿಂದಿನ ಟ್ವಿಟ್ಟರ್​) ಸರಣಿಯಾಗಿ ಸಮಸ್ಯೆಗಳನ್ನು ಬರೆದಿರುವ ಅವರು, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರ್ಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

10 ದಿನಗಳಲ್ಲಿ ನ್ಯಾಯ ಸಿಗದಿದ್ದರೆ ಸಲ್ಲೇಖನ ವ್ರತ! ಸರ್ಕಾರಕ್ಕೆ ಗುಣಧರನಂದಿ ಸ್ವಾಮೀಜಿಗಳ ಕೊನೆಯ ಎಚ್ಚರಿಕೆ…

ಜೈನ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ: ಚಿಕ್ಕೋಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಘೋಷಣೆ! ಜೈನ ಸಮುದಾಯದ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವ್ರತದ …

Leave a Reply

Your email address will not be published. Required fields are marked *