ಮಂಗಳೂರು (ದಕ್ಷಿಣ ಕನ್ನಡ): ನಗರದ ಪ್ರತಿಷ್ಠಿತ ಮೋತಿ ಮಹಲ್ ಹೋಟೆಲ್‌ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜರ್ವೊಬ್ಬರ ಮೃತದೇಹ ಪತ್ತೆಯಾಗಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್.ನಾಯರ್ ಮೃತಪಟ್ಟವರು. ಇವರು ಕೇರಳದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ಗೋಪು ಆರ್.ನಾಯರ್ ಅವರು ಸ್ಮಿಮ್ಮಿಂಗ್ ಪೂಲ್ನಲ್ಲಿ ಮುಳುಗಿ ಸಾವನ್ನಪ್ಪಿರುವ ಕುರಿತು ಅನುಮಾನ ವ್ಯಕ್ತವಾಗಿದೆ. ನಿನ್ನೆ (ಭಾನುವಾರ) ಮಂಗಳೂರಿಗೆ ಬಂದು ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಸಂಜೆ 4 ಗಂಟೆಯ ಸುಮಾರಿಗೆ ಕೊಠಡಿಯಿಂದ ಬ್ಯಾಂಕ್ ಅಧಿಕಾರಿ ಹೊರಹೋಗಿದ್ದರು. ಇದಾದ ಬಳಿಕ ಈಜುಕೊಳದಿಂದ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ. ಮೃತದೇಹ ಸುಮಾರು 11 ಅಡಿ ಆಳದಲ್ಲಿತ್ತು. ಈಜುತ್ತಿರುವಾಗ ಮೇಲೆ ಬರಲು ಸಾಧ್ಯವಾಗದೇ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಹೋಟೆಲ್ ರೂಂನಲ್ಲಿ ಮದ್ಯ ಸೇವಿಸಿ ಸ್ವಿಮ್ಮಿಂಗ್ ಪೂಲ್ಗೆ ಇಳಿದಿರುವ ಶಂಕೆ ವ್ಯಕ್ತವಾಗಿದೆ. ಇವರ ಕೊಠಡಿಯಲ್ಲಿ ಖಾಲಿಯಾದ ಮದ್ಯ ಬಾಟಲಿ ಸಿಕ್ಕಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





