Breaking News

ಕೆಎಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಐವರು ಮೃತ…

ಚಿತ್ರದುರ್ಗ: ಕೆಎಸ್​ಆರ್​ಟಿಸಿ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗು ಸೇರಿ ಐವರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಬಸ್ ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು. ಬಸ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಜೊತೆಗೆ ಕೆಲವರು ಗಾಯಗೊಂಡಿದ್ದಾರೆ.

ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ (45) , ರಾಯಚೂರಿನ ಮಸ್ಕಿ ಮೂಲದ ರಮೇಶ್ (40)‌, ರಾಯಚೂರು ಜಿಲ್ಲೆಯ ಆಲಾಪುರ ಮೂಲದ ರವಿ (23), ರಾಯಚೂರು ಮೂಲದ ಮಾಬಮ್ಮ (35) ಹಾಗೂ ಮಾನವಿ ಮೂಲದ ಮಗು ನರಸಪ್ಪ (5) ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ, ಮಾಬಮ್ಮ (35) ಚಿಕಿತ್ಸೆಗೆ ಸ್ಪಂದಿಸದೇ ಜಿಲ್ಲಾಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಬಸ್​​ನಲ್ಲಿದ್ದ 6 ಜನರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *