Breaking News

ಖಾಸಗಿ ಸಾರಿಗೆ ಬಂದ್​ಗೆ ಕರೆ…

ಬೆಂಗಳೂರು: ಕರ್ನಾಟಕ ಸರ್ಕಾರದ ಶಕ್ತಿ ಯೋಜನೆ ವಿರುದ್ಧ ಅಸಮಾಧಾನ, ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ರೂಪಾಯಿ ಧನಸಹಾಯ, ರಸ್ತೆ ತೆರಿಗೆ ರದ್ದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್​ಗೆ ಕರೆ ನೀಡಿದೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ರಾತ್ರಿ 12ರವರೆಗೆ ಖಾಸಗಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಬಂದ್‌ಗೆ ಒಕ್ಕೂಟ ನಿರ್ಧರಿಸಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗಿದೆ.

ಬೆಂಗಳೂರು ನಗರದಲ್ಲಿ ಸುಮಾರು 4 ಲಕ್ಷ ಆಟೋ, 2 ಲಕ್ಷ ಟ್ಯಾಕ್ಸಿ, 30 ಸಾವಿರ ಗೂಡ್ಸ್ ವಾಹನಗಳು, 8 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 90 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೊರೇಟ್ ಕಂಪನಿ ಬಸ್‌ಗಳು ಸಂಚಾರ ನಿಲ್ಲಿಸಲಿವೆ. ಓಲಾ, ಉಬರ್ ಆಟೋ ಟ್ಯಾಕ್ಸಿ ಸಹ ಬಂದ್ ಆಗಲಿವೆ. ಕಾರ್ಪೊರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‍ಗಳು ಕೂಡ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *