Breaking News

ಭಾರತ ದೇಶವನ್ನು ಪ್ರತಿನಿಧಿಸಿದ ಹಂಪಿಯ ಬಾಲ ಯೋಗಪಟುಗಳು ಚಿನ್ನ, ಬೆಳ್ಳಿ ಪದಕ ಗೆದ್ದಿದ್ದಾರೆ…

ವಿಜಯನಗರ: ಥಾಯ್ಲೆಂಡ್‌​ ದೇಶದ ಹವಾಡ ಕನ್ವೆನ್ಷನ್‌ ಸೆಂಟರ್‌ನಲ್ಲಿ ನಡೆದ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ ಹಂಪಿಯ ಬಾಲ ಯೋಗಪಟುಗಳು ಚಿನ್ನ, ಬೆಳ್ಳಿ ಪದಕ ಗೆದ್ದಿದ್ದಾರೆ. ನಾಗಮ್ಮ ಮತ್ತು ಗಣೇಶ್​ ಎಂಬಿಬ್ಬರು 16-18 ವರ್ಷದೊಳಗಿನ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಹಿಳಾ ವಿಭಾಗದಲ್ಲಿ ನಾಗಮ್ಮ ಮೊದಲ ಸ್ಥಾನ ಪಡೆದು ಚಿನ್ನ ಗೆದ್ದರು. ಪುರುಷರ ವಿಭಾಗದಲ್ಲಿ ಗಣೇಶ್ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.

ಈ ಇಬ್ಬರು ಬಾಲ ಪ್ರತಿಭೆಗಳು ಹಂಪಿಯ ಬೀದಿಬದಿ ವ್ಯಾಪಾರಿಗಳ ಮಕ್ಕಳು. ಇಲ್ಲಿನ ರಂಜು ಆರ್ಟ್ಸ್ ಯೋಗ ಟ್ರಸ್ಟ್​ನಲ್ಲಿ ಅಂದಾಜು 100 ಮಕ್ಕಳಿಗೆ ಉಚಿತವಾಗಿದ್ದ ಯೋಗಾಭ್ಯಾಸದಲ್ಲಿ ಭಾಗಿಯಾಗುತ್ತಿದ್ದರು. ಮಕ್ಕಳ ಪ್ರತಿಭೆ ಗುರುತಿಸಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ ಮಾಡಲಾಗಿತ್ತು. ಇಲ್ಲಿ ವಿಜೇತರಾಗಿ ಥಾಯ್ಲೆಂಡ್‌ನಲ್ಲಿ ನಡೆಯುವ ಸ್ಪರ್ಧೆಗೆ ಆಯ್ಕೆಯಾಗಿದ್ದರು.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *