Breaking News

ವಮೊಗ್ಗ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ….

ಶಿವಮೊಗ್ಗ: ತನ್ನ ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಓಮ್ನಿ ಕಾರನ್ನು ಚಲಾಯಿಸಲು ನೀಡಿದ ತಂದೆಗೆ ಶಿವಮೊಗ್ಗ ಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಸೆಪ್ಟಂಬರ್ 9 ರಂದು ಶಿವಮೊಗ್ಗ ಕರ್ನಾಟಕ ಸಂಘದ ಬಳಿ ಸಂಚಾರಿ ಪೊಲೀಸ್ ಠಾಣೆಯ ಪಿಸಿಐ ಹೆಚ್ ಎಸ್ ಶಿವಣ್ಣನವರ್ ವಾಹನ ತಪಾಸಣೆ ನಡೆಸುವಾಗ ಓಮ್ನಿ ಕಾರನ್ನು ತಪಾಸಣೆ ನಡೆಸಿದಾಗ ವಾಹನವನ್ನು 17 ವರ್ಷದ ಬಾಲಕ ಚಲಾಯಿಸುತ್ತಿರುವುದು ಕಂಡು ಬರುತ್ತದೆ. ನಂತರ ವಾಹನದ ದಾಖಲಾತಿ ಪರಿಶೀಲಿಸಿದಾಗ ವಾಹನವು ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರದ ಏಲಿಯಾಸ್(41) ಅವರಿಗೆ ಸೇರಿದ್ದು ಅನ್ನೋದು ಗೊತ್ತಾಗಿತ್ತು.

ಏಲಿಯಾಸ್ ತಮ್ಮ ಅಪ್ರಾಪ್ತ ವಯಸ್ಸಿನ ಮಗನಿಗ ವಾಹನವನ್ನು ಚಾಲನೆಗೆ ನೀಡಿ ಸಂಚಾರಿ ನಿಯಮದ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು. ಈ ಕುರಿತು ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಪೊಲೀಸರು ಸಲ್ಲಿಸಿದ್ದರು. 3ನೇ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ ಶಿವಮೊಗ್ಗ ಕೋರ್ಟ್​ ನ್ಯಾಯಾಧೀಶರು ಓಮ್ನಿ ವಾಹನದ ಮಾಲೀಕರಾದ ಬಾಲಕನ ತಂದೆ ಏಲಿಯಾಸ್ ಅವರಿಗೆ ರೂ. 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *