Breaking News

ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ..

ಬೆಂಗಳೂರು/ಉಡುಪಿ: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ, ಹಾಗು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ 6 ಮಂದಿ ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌.

ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್ (ವಿಶ್ವನಾಥ್ ಪಾತ್ರಧಾರಿ), ಧನರಾಜ್, ಶ್ರೀಕಾಂತ್ ಹಾಗೂ ಪ್ರಜ್ವಲ್ ಇನ್ನುಳಿದ ಬಂಧಿತರು. ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. 3 ಪ್ರತ್ಯೇಕ ತಂಡ ರಚಿಸಿಕೊಂಡು ಕಾರ್ಯಾಚರಣೆಗಿಳಿದಿದ್ದ ಸಿಸಿಬಿ ಪೊಲೀಸರು ಕಲಬುರಗಿ, ಚಿಕ್ಕಮಗಳೂರು, ಉಡುಪಿಯಲ್ಲಿ ಆರೋಪಿಗಳಿಗೆ ಶೋಧ ನಡೆಸಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಆರೋಪವನ್ನು ಚೈತ್ರಾ ಎದುರಿಸುತ್ತಿದ್ದಾರೆ. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕರಾಗಿರುವ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಚೈತ್ರಾ ವಿರುದ್ಧ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸರಿಗೂ ದೂರು ನೀಡಿದ್ದರು. ಕೇಂದ್ರದ ಬಿಜೆಪಿ ನಾಯಕರು ಹಾಗೂ ಆರ್​ಎಸ್​ಎಸ್​ ಪ್ರಮುಖರ ಹೆಸರಿನಲ್ಲಿ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *