ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹುಬ್ಬಳ್ಳಿಯ ಗ್ರಾಮೀಣ ಹಾಗೂ ನಗರ ತಹಶಿಲ್ದಾರರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಹೌದು.. ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಚಿವರು ತಾಲೂಕಿನ ಆಡಳಿತ ಹಾಗೂ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲನೆ ನಡೆಸಲು ಮುಂದಾಗಿದ್ದು, ಕಲಘಟಗಿ ತಾಲೂಕಿನ ಸರ್ಕಾರಿ ಕಚೇರಿಯ

ಭೇಟಿಯ ಬಳಿಕ ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಆಗಮಿಸಿ ತಾಲೂಕಾಡಳಿತದ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇನ್ನೂ ತಹಶಿಲ್ದಾರರಾದ ಕಲಗೌಡ ಪಾಟೀಲ ಹಾಗೂ ಪ್ರಕಾಶ ನಾಶಿಯವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇ-ಆಫೀಸ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗೆ ಸೂಕ್ತ ಟ್ರೇನಿಂಗ್ ನೀಡದೇ ಇರುವ ಹಿನ್ನೆಲೆಯಲ್ಲಿ ದಾಖಲೆಗಳು ತಿಂಗಳುಗಟ್ಟಲೆ ಕಚೇರಿಯಲ್ಲಿಯೇ ಕೊಳೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಲಕರಣೆಗಳ ಕೊರತೆಯ ಬಗ್ಗೆ ಸಮಜಾಯಿಷಿ ನೀಡಲು ಬಂದಿದ್ದ ತಹಶಿಲ್ದಾರರನ್ನು ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡಿದ್ದು, ಕೂಡಲೇ ಆನ್ ಲೈನ್ ವ್ಯವಸ್ಥೆ ಅನುಷ್ಠಾನಕ್ಕೆ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

