Breaking News

ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಎದುರು….

ನವದೆಹಲಿ: ಏಷ್ಯಾಕಪ್ 2023ರ ಸೂಪರ್ 4 ಸುತ್ತಿನ ಅಂತಿಮ ಪಂದ್ಯದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಎದುರಾಗಲಿವೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಫೈನಲ್​ ಪ್ರವೇಶಿಸಿರುವ ಭಾರತ ತಂಡಕ್ಕೆ ಈ ಪಂದ್ಯವು ಔಪಚಾರಿಕವಾಗಿದೆ. ಇನ್ನೊಂದೆಡೆ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾ ತಂಡ ಈ ಸುತ್ತಿನಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.

ಫೈನಲ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಎದುರಿಸಲಿದೆ. ಇಂದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಸಾಮರ್ಥ್ಯ ಪರೀಕ್ಷೆಗೆ ಅವಕಾಶ ಸಿಕ್ಕಂತಾಗಲಿದೆ. ಈ ಹಿಂದಿನ ಪಂದ್ಯಗಳಲ್ಲಿ 11ರ ಬಳಗದಲ್ಲಿ ಸ್ಥಾನ ಪಡೆಯದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ. ಈ ನಡುವೆ ಪಂದ್ಯಕ್ಕೆ ಮಳೆಯು ಕಾಡುವ ಸಾಧ್ಯತೆಯಿದೆ. ಹಾಗಾದ್ರೆ, ಈ ಪಂದ್ಯಕ್ಕೂ ಮುನ್ನ ಪ್ರೇಮದಾಸ ಸ್ಟೇಡಿಯಂನ ಪಿಚ್ ಮತ್ತು ಹವಾಮಾನ ವರದಿಯ ಕುರಿತು ತಿಳಿಯೋಣ ಬನ್ನಿ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *