Breaking News

ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯ ಕೊಲೆ…

ಮೈಸೂರು: ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಆಕೆಯ ಪತಿಯೇ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ (26) ಮೃತ ಮಹಿಳೆ. ಮಂಜು ಅಲಿಯಾಸ್ ಮಂಜುನಾಥ್ (27) ಕೊಲೆ ಆರೋಪಿ.

8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ದಂಪತಿಗೆ ಈಗಾಗಲೇ 5 ವರ್ಷದ ಗಂಡು ಮಗುವಿದೆ. ಮತ್ತೊಂದು ಮಗುವಿಗೆ ಶೋಭಾ 8 ತಿಂಗಳ ಗರ್ಭಿಣಿಯಾಗಿದ್ದಳು. ತವರು ಮನೆಯಿಂದ ಮನೆಗೆ ಪತ್ನಿ ಬರುತ್ತಿಲ್ಲವೆಂದು ಜಗಳ ತೆಗೆದ ಪತಿ ಕುಡಿದ ಮತ್ತಿನಲ್ಲಿ ಬ್ಲೇಡ್​ನಿಂದ ಕುತ್ತಿಗೆ ಕೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮಾರಣಾಂತಿಕವಾಗಿ ಗಾಯಗೊಂಡಿದ್ದ ಗರ್ಭಿಣಿಯನ್ನು ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *