Breaking News

ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ?

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ‌ಕಮಿಷನರ್ ಭೇಟಿ ಮಾಡುತ್ತಿದ್ದೇನೆ. ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ

ಬಿ.ಕೆ.ಹರಿಪ್ರಸಾದ್‌ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿದ್ದರಲ್ವಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆಯೇನು ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನನ್ನ ಡಿಎನ್ಎ ವಿಚಾರ ನಿಮಗ್ಯಾಕೆ? ನಾನು ಸ್ವಾಮೀಜಿ ಅಲ್ಲ ಅಂತ ಹೇಳಲು ಹಕ್ಕು ಕೊಟ್ಟವರು ಯಾರು? ಸಮುದಾಯಕ್ಕೆ ಅನ್ಯಾಯವಾದ್ರೆ ಅದಕ್ಕೆ ನೀವೇ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆಯಾ? ನಿಮ್ಮ ಸಾಧನೆ ಏನು? ಈಗ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿದ್ದೀರ. ಮುಂದೆ ಯಾವ ಪಕ್ಷಕ್ಕೆ ಹೋಗ್ತೀರಾ ಅಂತ ಗೊತ್ತಿಲ್ಲ. ಸಿದ್ದರಾಮಯ್ಯನವರು ಮಧು ಬಂಗಾರಪ್ಪ ಮಾತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *