Breaking News

ವಿಶೇಷ ರುದ್ರಾಕ್ಷಿ ಗಣಪತಿ ಕಲಾವಿದನ ಕೈ ಚಳಕ….

ಬೆಳಗಾವಿ:ಅದ್ಧೂರಿಯಾಗಿಗಣೇಶೋತ್ಸವ ಆಚರಿಸಲು ಬೆಳಗಾವಿ ಜಿಲ್ಲೆ ಸಜ್ಜಾಗುತ್ತಿದೆ.‌ ರುದ್ರಾಕ್ಷಿಗಳಿಂದಲೇ ತಯಾರಿಸಿರುವ ಸುಂದರ ಗಣಪನ ಮೂರ್ತಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ವಿಶೇಷ ಮೂರ್ತಿಯಲ್ಲಿ ಕಲಾವಿದನ ಕೈಚಳಕವನ್ನು ನೋಡಬಹುದು. ಸಂಪೂರ್ಣವಾಗಿ ರುದ್ರಾಕ್ಷಿಗಳಿಂದಲೇ ಕಂಗೊಳಿಸುತ್ತಿರುವ ಗಣೇಶನನ್ನು ಹಳೆ ಗಾಂಧಿ ನಗರದ ಕಲಾವಿದ ಸುನೀಲ ಸಿದ್ದಪ್ಪ ಆನಂದಾಚೆ ಸಿದ್ಧಪಡಿಸಿದ್ದಾರೆ. ತಮ್ಮ ತಂದೆ ಸಿದ್ದಪ್ಪ ಅವರಿಂದ ಬಳುವಳಿಯಾಗಿ ಪಡೆದಿರುವ ಮೂರ್ತಿ ರಚನೆ ಕಲೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ವೃತ್ತಿಯಲ್ಲಿ

ಪ್ಲಂಬರ್​ ಆಗಿರುವ ಸುನೀಲ ಪ್ರವೃತ್ತಿಯಲ್ಲಿ ಪರಿಸರಸ್ನೇಹಿ‌ ಗಣೇಶ ಮೂರ್ತಿ ಸಿದ್ಧಪಡಿಸುತ್ತಾರೆ.ಸುನೀಲ ಅವರ ಬಳಿಯಿಂದ ಅನೇಕ ವರ್ಷಗಳಿಂದ ಮೂರ್ತಿಯನ್ನು ನಾನಾವಾಡಿಯ ಗಣೇಶೋತ್ಸವ ಮಂಡಳಿಯವರು ಕೊಂಡೊಯ್ಯುತ್ತಿದ್ದಾರೆ. ಪರಿಸರಕ್ಕೆ ಮಾರಕವಾಗದ ವಿಶಿಷ್ಟ ಗಣಪತಿಯನ್ನೇ ಸುನೀಲ ಅವರ ಬಳಿ ಅವರು ಮಾಡಿಸುತ್ತಿದ್ದಾರೆ. ಈ ಹಿಂದೆ ವಾಲ್ ನಟ್, ಮೋದಕ, ಬಟ್ಟೆಯ ಹೂವು, ಯೂಸ್ ಆಂಡ್ ಥ್ರೋ ಪೇಪರ್ ಕಪ್, ಮರಳು, ಡ್ರೈ ಫ್ರೂಟ್ಸ್, ವಿವಿಧ ಧಾನ್ಯಗಳಿಂದ ತಯಾರಿಸಿದ್ದ ಗಣೇಶ ಮೂರ್ತಿಗಳನ್ನು ಮಾಡಿಸಿದ್ದರು. ಈ ಬಾರಿ ರುದ್ರಾಕ್ಷಿ ಗಣಪನ ಪ್ರತಿಷ್ಠಾಪಿಸಲು ತೀರ್ಮಾನಿಸಿದ್ದಾರೆ.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *