Breaking News

ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ: ಡಾ.ಜಿ.ಪರಮೇಶ್ವರ್.

ಮಂಡ್ಯ: ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ ಎಂದು ಮಂಡ್ಯದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾತನಾಡಿದ ಅವರು, ಇದೆಲ್ಲ ನಮ್ಮ ವರಿಷ್ಠರು ತೀರ್ಮಾನ ಮಾಡುವಂಥದ್ದು. ವೈಯಕ್ತಿಕ ಅಭಿಪ್ರಾಯಗಳನ್ನು ನಮ್ಮವರು ಆಗಾಗ್ಗೆ ಹೇಳುತ್ತಿರುತ್ತಾರೆ ಎಂದರು.

ಈ ವಿಚಾರವನ್ನು ಹೈಕಮಾಂಡ್​ಗೆ ಬಿಟ್ಟು ಬಿಡೋಣ. ಅದನ್ನು ಅವರೇ ಕೇಳಬೇಕು. ನಾನು ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಹೇಳಿದ್ದಾರೆ ತಪ್ಪಲ್ಲ ಎಂದು ಹೇಳಿದರು. ಕಾವೇರಿ ನಿರ್ವಾಹಣಾ ಪ್ರಾಧಿಕಾರದ ಸಭೆ ಬಗ್ಗೆ ಮಾತನಾಡುತ್ತಾ, ಇಂದು ಏನು ತೀರ್ಪು ಬರುತ್ತದೆ ಎಂದು ಕಾದು ನೋಡೋಣ. ತೀರ್ಪು ನಮ್ಮ ಪರವಾಗಿ ಬರಬೇಕೆಂಬುದು ನಮ್ಮ ಆಸೆ. ಅದಕ್ಕೆ ತಕ್ಕಂತೆ ಎಲ್ಲಾ ವಿಷಯಗಳನ್ನೂ ತಿಳಿಸಿದ್ದೇವೆ ಎಂದು ತಿಳಿಸಿದರು.

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *