Breaking News

7 ತಿಂಗಳ ಗರ್ಭಿಣಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್….

ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್‌ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ ಅಪರೂಪದ ಸಾಧನೆಯನ್ನು ಗುರುತಿಸಿ ಪರಿಶೀಲನೆ ನಡೆಸಿದ ಗಿನ್ನಿಸ್ ರೆಕಾರ್ಡ್ ತಂಡ ಪ್ರಶಸ್ತಿ ನೀಡಿ ಗೌರವಿಸಿದೆ.
ಸುಬ್ಬಲಕ್ಷ್ಮೀ ಮೂರು ತಿಂಗಳ ಗರ್ಭಿಣಿಯಿದ್ದಾಗ 20 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ದಾಖಲೆಯಿಂದ ವಂಚಿತರಾಗಿದ್ದರು. ಆದರೂ ಛಲ ಬಿಡದೆ 7 ತಿಂಗಳ ಗರ್ಭಿಣಿಯಿದ್ದಾಗ ಮತ್ತೊಮ್ಮೆ ಪ್ರಯತ್ನಿಸಿ 26 ಗಂಟೆ ನುಡಿಸಿದ್ದಾರೆ. ಈ ಮೂಲಕ ಸಾಧನೆಯ ಶಿಖರವನ್ನೇರಿದ್ದಾರೆ.

ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು ಸೇರಿದಂತೆ 109ಕ್ಕೂ ಅಧಿಕ ಭಾಷೆಗಳಲ್ಲಿ ಇವರು ಸ್ಯಾಕ್ಸೊಫೋನ್ ನುಡಿಸಬಲ್ಲರು. ಈಗಾಗಲೇ ದೇಶದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಸೈ ಎನಿಸಿಕೊಂಡಿದ್ದಾರೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *