Breaking News

ಅಕ್ರಮವಾಗಿ ಇ-ಸಿಗರೇಟ್​ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ….

ದೇವನಹಳ್ಳಿ: ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್​ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 15.9 ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆಯಲಾಗಿದೆ.

ಸೋಮವಾರ ಮಲೇಷ್ಯಾದ ಕೌಲಾಲಂಪುರ್​ನಿಂದ ಮಲೇಷ್ಯಾ ಏರ್‌ಲೈನ್ಸ್ ಎಮ್ ಹೆಚ್ 192 ವಿಮಾನದ ಮೂಲಕ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಲಗೇಜ್​ಗಳನ್ನು ಪರಿಶೀಲನೆ ಮಾಡುವಾಗ ಅಕ್ರಮ ಪತ್ತೆಯಾಗಿದೆ. 1,590 ಇ-ಸಿಗರೇಟ್​ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಕಸ್ಟಮ್ಸ್ ಕಾಯಿದೆ 1962 ಅಡಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *