Breaking News

ಭರ್ಜರಿಯಾದ ಗಣೇಶ ಮೂರ್ತಿಗಳ ಮಾರಾಟ…..

ಗದಗ: ಗಣೇಶ ಹಬ್ಬ ಅಂದ್ರೆ ಸಡಗರ ಸಂಭ್ರಮ ಇದ್ದೇ ಇರುತ್ತೆ.‌ ನಗರದಲ್ಲಿ ಹಬ್ಬಕ್ಕೆ ಮುಂಚಿನ ದಿನವೇ ಖರೀದಿ ಭರಾಟೆ ಬಲು ಜೋರಾಗಿದೆ. ಮಾರ್ಕೆಟ್​ನತ್ತ ಬರುತ್ತಿರೋ ಜನ ತಮಗೆ ಇಷ್ಟವಾದ ಮೂರ್ತಿಗಳನ್ನ ಬುಕ್ ಮಾಡಿದ್ದಾರೆ. ಪರಿಸರ ಸ್ನೇಹಿ ಗಣಪತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸಬೇಕು ಅನ್ನೋ ನಿಟ್ಟಿನಲ್ಲಿ ಗದಗ ಜಿಲ್ಲೆ ತಯಾರಕರು ಒಂದೇ ಸೂರಿನಡಿ ಗಣೇಶ ಮೂರ್ತಿಗಳ ಮಾರಾಟ ಮಾಡೋದಕ್ಕೆ ಮುಂದಾಗಿದ್ದು, ಪರಿಸರ ಸ್ನೇಹಿ ಗಣಪಗಳ ಮಾರಾಟವೂ ಭರ್ಜರಿಯಾಗಿ ನಡೀತಿದೆ.

ಗದಗ ನಗರದ ಎಪಿಎಂಸಿ ಆವರಣದಲ್ಲಿ ಇರುವ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಗಣೇಶ ಮೂರ್ತಿ ಮಾರಾಟ ಭರ್ಜರಿಯಾಗಿದೆ. ಗದಗ ಬೆಟಗೇರಿ ಸೇರಿದಂತೆ ಸುತ್ತಲ ಜಿಲ್ಲೆಯ ಕಲಾವಿದರು ತಾವು ತಯಾರಿಸಿದ ಮೂರ್ತಿಗಳನ್ನ ಇಲ್ಲಿ‌ ತಂದು ಮಾರಾಟ ಮಾಡೋದಕ್ಕೆ ಮುಂದಾಗಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ಗಣೇಶ ಮೂರ್ತಿಗಳ ತಯಾರಕರ ಹಾಗೂ ಮಾರಾಟದ ವಿರುದ್ಧ ಹೋರಾಟ ಮಾಡಿದ್ದ ಗದಗ ಮೂರ್ತಿ ತಯಾರಕರ ಸಂಘ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಕರಿಗೆ ಉತ್ತೇಜನ ನೀಡುತ್ತಾ ಬಂದಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *