ಚಾಮರಾಜನಗರ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ರಾಮದ ಚೆನ್ನಪ್ಪ (60) ಸಾವಿಗೀಡಾದವರು. 14 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಭಾನುವಾರ ಸಂಜೆ ಕುಟುಂಬಸ್ಥರು ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಸಿ ಚಿತೆಗೆ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು ದಾಳಿ ಮಾಡಿವೆ. ಚೆನ್ನಪ್ಪ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಅಸುನೀಗಿದರು. ಉಳಿದ ಹಲವರು ಹೋಲಿ ಕ್ರಾಸ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರು ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





