Breaking News

ಈದ್ಗಾ ಮೈದಾನಕ್ಕೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ಗಜಮುಖನ ಎಂಟ್ರಿ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ.ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ಪ್ರತಿಷ್ಟಾಪನೆ ಮಾಡಲಾಗಿದೆ.ಇನ್ನೂ ಮೂರು ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಹಬ್ಬದ ವಾತಾವರಣ ನಿರ್ಮಾಣಕ್ಕೆ ಸಾಕ್ಷಿಯಾಗಿದೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *