Breaking News

ರಸ್ತೆ ಅಪಘಾತದಲ್ಲಿ ಕಾನಸ್ಟೇಬಲ್ ಸಾವು: ರಕ್ತವರ್ಣದ ಗಜಮುಖನಿಗೆ ಬಾರದೆ ಹೊಯಿತೆ ಕರುಣೆ…!

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಧ್ಯೆ ಇರುವ ಕಿಲ್ಲರ್ ಬೈಪಾಸ್‌ನಲ್ಲಿ ಮತ್ತೆ ಅಪಘಾತವಾಗಿದ್ದು, ಈ ಅಪಘಾತದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಧಾರುಣವಾಗಿ ಸಾವಿಗೀಡಾಗಿದ್ದಾರೆ.

ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಚ್ಚೇಶ ಹಿರೇಗೌಡರ (37) ಎಂಬುವವರೇ ಅಪಘಾತದಲ್ಲಿ ಸಾವಿಗೀಡಾದವರು. ಲಕ್ಷ್ಮೀ ಎಂಬ ಇನ್ನೋರ್ವ ಮಹಿಳಾ ಕಾನ್‌ಸ್ಟೇಬಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ

ಈ ಇಬ್ಬರನ್ನೂ ಛಬ್ಬಿ ಗಣೇಶೋತ್ಸವದ ಸಲುವಾಗಿ ಅಲ್ಲಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕರ್ತವ್ಯ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಇಟಿಗಟ್ಟಿ ಬಳಿ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದುಕೊಂಡು ಹೋಗಿದೆ.

ಡಿಕ್ಕಿ ರಭಸಕ್ಕೆ ಹುಚ್ಚೇಶ ಅವರ ಮೃತ ದೇಹ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಲಕ್ಷ್ಮೀ ಅವರೂ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *