ಮಂಗಳೂರು: “ಕೌನ್ ಬನೇಗಾ ಕರೋಡ್ ಪತಿ” ಹೆಸರಿನಲ್ಲಿ ಪುತ್ತೂರಿನ ಮಹಿಳೆಯೋರ್ವರಿಗೆ ರೂ. 12.93 ಲಕ್ಷ ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿಯಾದ ಝೀನತ್ ಬಾನು ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಝೀನತ್ ಬಾನು ಅವರಿಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದನು.
ಆತ, ಮಹಿಳೆ 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ತಿಳಿಸಿರುತ್ತಾನೆ. ನಂತರ ಈ ಹಣವನ್ನು ಪಡೆಯಲು ಟ್ಯಾಕ್ಸ್ ಕಟ್ಟಲು ಹಾಗೂ ಇನ್ನಿತರ ಚಾರ್ಜಸ್ ಕಾರಣ ಹೇಳಿ ಮಹಿಳೆಯಿಂದ 2022 ಮೇ ತಿಂಗಳಿನಿಂದ 2023 ಸೆಪ್ಟೆಂಬರ್ 13 ರವರೆಗಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು ರೂ. 12,93,200 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಮಹಿಳೆ ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





