Breaking News

ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಹಾವು…..

ಪುತ್ತೂರು (ದಕ್ಷಿಣ ಕನ್ನಡ): ಹಲವು ಪ್ರಕಾರ, ಆಕಾರಗಳ ಹಾವುಗಳಿದ್ದರೂ, ಅವುಗಳಲ್ಲಿ ಕೆಲವು ಮಾತ್ರ ಜನರ‌ ಗಮನ ಸೆಳೆಯುತ್ತವೆ. ಆದರೆ ಇಂಥ ಅನೇಕ ಪ್ರಬೇಧಗಳ ಹಾವುಗಳು ಜನರ ಗಮನಕ್ಕೂ ಬಾರದೇ ದಟ್ಟ ಅರಣ್ಯಗಳ ಮಧ್ಯೆ ತಮ್ಮ ಪಾಡಿಗೆ ಬದುಕುತ್ತಿವೆ. ಇಂಥದೇ ದಟ್ಟಾರಣ್ಯಗಳ ಮಧ್ಯೆ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವೊಂದು ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯ ಟೇಬಲ್​ ಮೇಲೆ ಹರಿದಾಡುತ್ತಿತ್ತು. ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು ಆ ಹಾವನ್ನು ರಕ್ಷಿಸಿ ಮತ್ತೆ ಅದರ ವಾಸಸ್ಥಾನ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ.

ಫಾರ್ಸ್ಟೆನ್​ ಕ್ಯಾಟ್ ಸ್ನೇಕ್ (ಬೆಕ್ಕು ಕಣ್ಣಿನ ಹಾವು) ಎಂದು ಕರೆಯಲಾಗುವ ಈ ಹಾವನ್ನು ನೋಡಿದ ಉರಗತಜ್ಞ ತೇಜಸ್ ಅವರು, ಪುತ್ತೂರಿನಲ್ಲಿ ಈ ರೀತಿಯ ಹಾವು ಪತ್ತೆಯಾಗಿರುವುದೇ ಅಪರೂಪ ಎಂದಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಾವು ಹಿಡಿದು ಅವುಗಳ ರಕ್ಷಣೆ ಮಾಡುತ್ತಿರುವ ತೇಜಸ್ ಕಳೆದ ಹಲವು ವರ್ಷಗಳಿಂದ ಹಲವು ರೀತಿಯ, ಹಲವು ಪ್ರಕಾರದ ಹಾವುಗಳನ್ನು ರಕ್ಷಣೆ ಮಾಡಿದ್ದು, ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಹಾವುಗಳನ್ನು ರಕ್ಷಿಸಿದ್ದಾರೆ. ಹೆಚ್ಚಾಗಿ ಪಶ್ಚಿಮ ಘಟ್ಟದಂತಹ ದಟ್ಟ ಅರಣ್ಯಗಳ ಮಧ್ಯೆಯೂ ಅಪರೂಪವಾಗಿ ಕಾಣಸಿಗುತ್ತವೆ ಈ ಬೆಕ್ಕು ಕಣ್ಣಿನ ಹಾವು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *