Breaking News

ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆ……

ಕೋಲಾರ: ಪೊರಕೆಯಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಲಾದ ಘಟನೆ ಕೋಲಾರದಲ್ಲಿ‌ ಜರುಗಿದೆ. ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ಘಟ‌ನೆ ನಡೆದಿದ್ದು, ಶ್ರೀನಿವಾಸ್ (30) ಎಂಬವರು ಸಾವನ್ನಪ್ಪಿದ್ದಾರೆ.

ಗ್ರಾಮದ ನಿವಾಸಿಗಳಾದ ಅಶೋಕ್, ರಮೇಶ್, ಧರ್ಮೇಂದ್ರ ಹಾಗೂ ಮಂಜು ಎಂಬವರು ಬುಧವಾರ ಸಂಜೆ ಶ್ರೀನಿವಾಸ್‌ಗೆ ಮನಬಂದಂತೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಜಾತಿ ನಿಂದನೆಯನ್ನೂ ಮಾಡಿದ್ದಾರೆ. ಇದರಿಂದ ತೀವ್ರವಾಗಿ ಮನನೊಂದ ಶ್ರೀನಿವಾಸ್ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಮೃತನ ಪತ್ನಿ ಮತ್ತು ಕುಟುಂಬಸ್ಥರು ಹಲ್ಲೆ ನಡೆಸಿದವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆಗಟ್ಟುವಿಕೆ) ಕಾಯಿದೆ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಮಾಲೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *