Breaking News

ಸಂಕಷ್ಟದ ಕಾಲದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಬಂಗಾರಪ್ಪರಂತೆ ಸುಗ್ರೀವಾಜ್ಞೆ ಜಾರಿಗೆ ತರಬೇಕು: ಮುಖ್ಯಮಂತ್ರಿ ಚಂದ್ರು.

ಬೆಂಗಳೂರು: ಸಂಕಷ್ಟದ ಕಾಲದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಬಂಗಾರಪ್ಪರಂತೆ ಸುಗ್ರೀವಾಜ್ಞೆ ಜಾರಿಗೆ ತರಬೇಕು. ಇದಕ್ಕಾಗಿ ಕೂಡಲೇ ತುರ್ತು ಅಧಿವೇಶನ ಕರೆದು ಕಠಿಣ ನಿರ್ಧಾರಕ್ಕೆ ಮುಂದಾಗಬೇಕು, ಸರ್ಕಾರ ಹೋದರೂ ಚಿಂತೆ ಇಲ್ಲ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ನಿಲುವು ಪ್ರಕಟಿಸಬೇಕು ಎಂದು ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ‌.

ಕರ್ನಾಟಕ ಜಲ ಸಂರಕ್ಷಣಾ ಸಮಿತಿಯಿಂದ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿಂದು, ನಮ್ಮ ನೀರು ನಮ್ಮ ಹಕ್ಕು ಪ್ರತಿಪಾದಿಸಲು ಚಿಂತನ ಮಂಥನ ವಿಚಾರಗೋಷ್ಟಿ ಆಯೋಜಿಸಲಾಗಿತ್ತು. ಇದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕೂಡ ನೀರು ನಿರ್ವಹಣಾ ಪ್ರಾಧಿಕಾರದ ಪರ ತೀರ್ಪು ನೀಡಿದೆ ಇದಕ್ಕೆ ಕಾರಣರಾದ ರಾಜ್ಯ, ಕೇಂದ್ರ ಸರ್ಕಾರ, ಎಜಿ ಇತರರ ನಡೆಯನ್ನು ಖಂಡಿಸುತ್ತೇನೆ, ವಾದ ಮಾಡುವಲ್ಲಿ ವೈಫಲ್ಯರಾಗಿದ್ದಾರೆ ಎಂದು ಕಿಡಿಕಾರಿದರು.

ಈ ಬಾರಿ ನೀರು ಬಿಡುವುದು ಅನುಮಾನ ಎಂದು ಅರಿತು ಮೊದಲೇ ತಮಿಳುನಾಡಿನವರು ಸುಪ್ರೀಂ ಕೋರ್ಟ್​ಗೆ ಅಪೀಲ್ ಹೋಗುತ್ತಾರೆ ಆದರೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಯಾಕೆ ಮೊದಲೇ ಹೋಗಲಿಲ್ಲ. ಪ್ರಾಧಿಕಾರ ಕೇಂದ್ರದ ಆದೇಶದ ಮೇಲೆ ಮಾಡಲಾಗಿದೆ, ನಿರ್ವಹಣಾ ಮಂಡಳಿ ಕೂಡ ಕೇಂದ್ರದ್ದೇ ಆಗಿದೆ, ನಿಮ್ಮ ಹಿಡಿತ ಎಲ್ಲಿದೆ, ನೀವು ರಾಜಕಾರಣ ಬಿಡಿ ಕೂಡಲೇ ತುರ್ತು ಅಧಿವೇಶನ ಕರೆದು ಹಿಂದೆ ಬಂಗಾರಪ್ಪ ಮಾಡಿದಂತೆ ನಿರ್ಧಾರ ಮಾಡಿ, ಸಂಕಷ್ಟ ಸಂದರ್ಭದಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸುಗ್ರೀವಾಜ್ಞೆ ತನ್ನಿ.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *