Breaking News

ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ….

ಬೆಂಗಳೂರು: ಬಹುದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿರುವ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಇಂದು ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈಗ ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಲಿದ್ದಾರೆ. ಎರಡು ದಿನಗಳ ಕಾಲ ದೆಹಲಿಯಲ್ಲೇ ವಾಸ್ತವ್ಯ ಹೂಡುವ ಕುಮಾರಸ್ವಾಮಿ ಅವರು, ಸೀಟು ಹಂಚಿಕೆಯನ್ನು ಅಂತಿಮಗೊಳಿಸಿಕೊಂಡೇ ಅವರು ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *