Breaking News

ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಆರಂಭ

ದೆಹಲಿ: ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಆರಂಭವಾಗಿದೆ. ವರ್ಚುವಲ್ ಮೂಲಕ ನಡೆಯುತ್ತಿರುವ ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿದ್ದಾರೆ.

ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕಾವೇರಿ ನೀರು ಹರಿಸುವಂತೆ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಕರ್ನಾಟಕದಲ್ಲಿ (Karnataka) ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ ಬಂದ್ ಬಳಿಕ ಬೆಂಗಳೂರು ಬಂದ್‌ಗೂ (Bengaluru Bandh) ಕರೆ ನೀಡಲಾಗಿದೆ. ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮಂಗಳವಾರ ಸಭೆ ಕರೆದಿದೆ

ಸಭೆಯಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳಲು ಕರ್ನಾಟಕ ನಿರ್ಧರಿಸಿದೆ. ನೀರಿನ ಕೊರತೆ ನಡುವೆ CWRC, CWMA ನೀಡಿರುವ ಎಲ್ಲಾ ಆದೇಶಗಳನ್ನು ಪಾಲಿಸಿದೆ. ಈಗ ನೀರಿನ ಕೊರತೆ ಹೆಚ್ಚಳವಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಸಣ್ಣ ಪ್ರಮಾಣದ ಕೃಷಿಗೂ ಸಮಸ್ಯೆಯಾಗುವ ಸಾಧ್ಯತೆಗಳಿದೆ. ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆಗಳು ಶುರುವಾಗಿದ್ದು, ಬೆಂಗಳೂರು ಬಂದ್‌ಗೂ ಕರೆ ನೀಡಲಾಗಿದೆ. ಈ ಹಂತದಲ್ಲಿ ನೀರು ಹರಿಸಲು ಸೂಚಿಸುವುದು ಸೂಚ್ಯವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ

Share News

About BigTv News

Check Also

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ …

Leave a Reply

Your email address will not be published. Required fields are marked *