ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ (Karnataka) ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್ 15ರವರೆಗೆ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿನ (Tamil Nadu) ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ.
ಕರ್ನಾಟಕದ ವಾದ ಏನಿತ್ತು?
ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು
bigtvnews | Hubli Dharwad News | Kannada News | Karnataka News Hubli News | News In Hubli | Local news





